ಲೋಕಸಭಾ ಚುನಾವಣಾ ನೀತಿ ಸಂಹಿತೆ: ದಾಖಲೆ ಇಲ್ಲದ 99 ಲಕ್ಷ ರೂ. ಹಣ ವಶಕ್ಕೆ

ಹೊಸದಿಗಂತ ವರದಿ, ಮಂಡ್ಯ :

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರದಲ್ಲಿ ಕಾರೊಂದರಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 99 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮದ್ದೂರು ಬಳಿಯ ನಿಡಘಟ್ಟ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಬಂದ ಕಾರನ್ನು ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಮಯದಲ್ಲಿ ಡ್ಯಾಶ್‌ಬೋರ್ಡ್‌ನಲ್ಲಿ ಬ್ಯಾಗುಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಕಂಡುಬಂದಿದೆ. ಹಣದ ಸಂಬಂಧವಾಗಿ ಕಾರಿನಲ್ಲಿದ್ದವರನ್ನು ವಿಚಾರಿಸಿದಾಗ ಸಮರ್ಪಕ ಉತ್ತರ ದೊರಕಲಿಲ್ಲ. ಹಣವನ್ನು ಸಾಗಿಸುತ್ತಿರುವುದಕ್ಕೂ ಸೂಕ್ತ ದಾಖಲೆಗಳೂ ಇರದಿದ್ದ ಕಾರಣ ಪೊಲೀಸರು ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ಸಾಗಿಸಲಾಗುತ್ತಿತ್ತು. ಚುನಾವಣೆ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿದ್ದ ಹಣವೇ ಎಂಬ ಬಗ್ಗೆ ಪೊಲೀಸರು ನಡೆಸುವ ತನಿಖೆಯಿಂದಷ್ಟೇ ತಿಳಿಯಬೇಕಿದೆ. ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬಂದ ನಂತರದಲ್ಲಿ ದಾಖಲೆಯಿಲ್ಲದೆ ಹಣ ಸಾಗಿಸುತ್ತಿರುವ ಸಂಬಂಧ ಬೆಳಕಿಗೆ ಬಂದಿರುವ ಮೊದಲ ಪ್ರಕರಣ ಇದಾಗಿದೆ.

ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ 99 ಲಕ್ಷ ರೂ. ಸಾಗಿಸುತ್ತಿದ್ದುದ್ದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಐಟಿ ಇಲಾಖೆಗೆ ಮಾಹಿತಿ ನೀಡಿದ್ದು, ಅವರು ಪ್ರಕರಣ ಕುರಿತಂತೆ ತನಿಖೆ ನಡೆಸಿ ವರದಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!