Lok Sabha Election| ಕಾಂಗ್ರೆಸ್‌ ಮೊದಲ ಪಟ್ಟಿ ರಿಲೀಸ್‌: ಜಯಪ್ರಕಾಶ್‌ ಹೆಗ್ಡೆ, ಗೀತಾ ಸೇರಿ 8‌ ಮಂದಿಗೆ ಟಿಕೆಟ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಫೈನಲ್ ಆಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಕರ್ನಾಟಕ, ಕೇರಳ, ಚತ್ತೀಸಘಡ, ತೆಲಂಗಾಣ, ಮೆಘಾಲಯ, ನಾಗಾಲ್ಯಾಂಡ್ ಹಾಗೂ ಸಿಕ್ಕಿಂನ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಹುಲ್ ಗಾಂಧಿ ಕೇರಳದ ವಯಾನಾಡಿನಿಂದ ಈ ಬಾರಿಯೂ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್‌ಗೆ ಟಿಕೆಟ ಫೈನಲ್ ನೀಡಲಾಗಿದೆ. ಕಾಂಗ್ರೆಸ್‌ಗೆ ವಲಸೆ ಹೋಗಿರುವ (ಕಾಂಗ್ರೆಸ್‌ಗೆ ಸೇರ್ಪಡೆಯಾಗಬೇಕಿದೆ) ಜಯಪ್ರಕಾಶ್‌ ಹೆಗ್ಡೆ ಅವರಿಗೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್‌ ಅನ್ನು ನೀಡಲಾಗಿದೆ ಎನ್ನಲಾಗುತ್ತಿದೆ.

ಈ ಎಂಟೂ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್‌ ಅವರು ಹಾಲಿ ಸಂಸದರಾಗಿದ್ದು, ಉಳಿದ ಕಡೆ ಬಹುತೇಕ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ಹಲವು ರೀತಿಯ ಜಾತಿ ಸಮೀಕರಣವನ್ನು ಮಾಡಲಾಗಿದೆ. ಈಡಿಗ ಸಮುದಾಯದ ಪ್ರಾಬಲ್ಯವನ್ನೂ ಹೊಂದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಹಾಸನಕ್ಕೆ ಒಕ್ಕಲಿಗ ಸಮುದಾಯದ ಶ್ರೇಯಸ್‌ ಪಟೇಲ್‌ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಪ್ರಾಬಲ್ಯ ಇರುವ ಜಾತಿಗಳನ್ನು ಗಮನಿಸಿಯೇ ಟಿಕೆಟ್‌ ನೀಡಲಾಗಿದೆ ಎನ್ನಲಾಗಿದೆ. ಆದರೆ, ಚಿಕ್ಕಮಗಳೂರು ಕ್ಷೇತ್ರದ ಜಯಪ್ರಕಾಶ್‌ ಹೆಗ್ಡೆ (ಕಾಂಗ್ರೆಸ್‌ಗೆ ಸೇರ್ಪಡೆಯಾಗಬೇಕಿದೆ) ಹಾಗೂ ಚಿತ್ರದುರ್ಗದ ಬಿ.ಎನ್‌. ಚಂದ್ರಪ್ಪ ಹೆಸರನ್ನು ಪ್ರಕಟಿಸಿದ್ದರೂ ಸಹ ತಾತ್ಕಾಲಿಕವಾಗಿ (Seats on hold) ತಡೆಹಿಡಿಯಲಾಗಿದೆ.

ಕರ್ನಾಟಕದ 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಕ್ಕೆ ಟಿಕೆಟ್ ಫೈನಲ್
1. ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
2. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
3. ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
4. ವಿಜಯಪುರ – ರಾಜು ಆಲಗೂರು – ಎಸ್.ಸಿ
5. ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
6. ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ – ಒಕ್ಕಲಿಗ

ತಾತ್ಕಾಲಿಕ ತಡೆ ಹಿಡಿಯಲಾದ ಅಭ್ಯರ್ಥಿಗಳ ಹೆಸರು
1. ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ – ಬಂಟ್ಸ್
2. ಚಿತ್ರದುರ್ಗ – ಬಿ.ಎನ್ ಚಂದ್ರಪ್ಪ – ಎಸ್.ಸಿ

ಶೀಘ್ರದಲ್ಲೇ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!