ಲೋಕಸಭೆ ಚುನಾವಣೆ ಮುಗೀಲಿ, ರಾಹುಲ್ ಗಾಂಧಿ ಅರೆಸ್ಟ್ ಮಾಡ್ತೀವಿ: ಸಿಎಂ ಹಿಮಂತ್ ಬಿಸ್ವಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಲೋಕಸಭಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸುತ್ತೇವೆ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ಅಸ್ಸಾಂ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಸಾಕಷ್ಟು ಮಂದಿ ಗಾಯಗೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮೇಲೆ ಎಫ್‌ಐಆರ್ ದಾಖಲಾಗಿತ್ತು.

ರಾಗಾ ಶಾಂತಿ ಕದಡಲು ಯತ್ನಿಸಿದ್ದಾರೆ. ಎಸ್‌ಐಟಿ ತಂಡ ರಚನೆ ಮಾಡಿ ಪ್ರಕರಣದ ತನಿಖೆ ನಡೆಸಲಾಗುತ್ತದೆ. ಲೋಕಸಭೆ ಚುನಾವಣೆ ನಂತರ ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!