ಹೊಸದಿಗಂತ ವರದಿ ಕೊಪ್ಪಳ:
ರಾಜ್ಯದಲ್ಲಿ ಬಿಜೆಪಿ ಜೋಡೆತ್ತುಗಳಾದ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುವುದು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರಾಗಿ ಆಯ್ಕೆಯಾದ ಆರ್.ಅಶೋಕ ಅವರಿಗೆ ಅಭಿನಂದನೆಗಳು. ಅವರು ಏಳು ಬಾರಿ ಶಾಸಕರಾಗಿದ್ದು, ಚುನಾವಣೆ ತಂತ್ರಗಾರಿಕೆಯಲ್ಲಿ ಮುಂಚೂಣಿ ಸ್ಥಾನದಲ್ಲಿ ಇದ್ದಾರೆ.
ಅಶೋಕ್ ಹಾಗೂ ಯುವ ನಾಯಕ ಬಿ.ವೈ. ವಿಜಯೇಂದ್ರ ಸಂಘಟನೆಯೊಂದಿಗೆ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನ ಗಳಿಸಿ ದೇಶದಲ್ಲಿ ಮತ್ತೊಮ್ಮೆ ಚುಕ್ಕಾಣಿ ಹಿಡಿಯಲಿದೆ ಎಂದರು.