ಲೋಕಸಭೆ ಚುನಾವಣೆ : UPSC ಪೂರ್ವಭಾವಿ ಪರೀಕ್ಷೆ ದಿನಾಂಕ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದ (UPSC) ಪೂರ್ವಭಾವಿ ಪರೀಕ್ಷೆಯನ್ನು (UPSC Prelims) ಮುಂದೂಡಿಕೆ ಮಾಡಲಾಗಿದೆ.

ಮುಂದಿನ ಪರೀಕ್ಷೆಯನ್ನು ಮೇ 26ರ ಬದಲು ಜೂನ್‌ 16ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿ ತಿಳಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ತೀರ್ಮಾನಿಸಿದೆ. ಜೂನ್‌ 16ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಭಾರತೀಯ ಅರಣ್ಯ ಸೇವಾ ಪರೀಕ್ಷೆಯನ್ನೂ ಜೂನ್‌ 16ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಯು ಸೆಪ್ಟೆಂಬರ್‌ 20ರಿಂದ 5 ದಿನಗಳವರೆಗೆ ನಡೆಯಲಿದೆ. ಪ್ರತಿ ವರ್ಷವೂ ಯುಪಿಎಸ್‌ಯು ಮೂರು ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಸುತ್ತದೆ.

ಏಪ್ರಿಲ್‌ 19ರಿಂದ ಜೂನ್‌ 1ರ ಅವಧಿಯಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನವು ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 1ರಂದು ಚುನಾವಣೆ ಮುಗಿಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!