ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ರಾಜ್ಯದ 14 ಜಿಲ್ಲೆಗಳಲ್ಲಿ ನಾಳೆ ಮತದಾನ ನಡೆಯಲಿದೆ. ಆದರೆ, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೂರು ಗ್ರಾಮಗಳ ನಿವಾಸಿಗಳು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಬೈರ್ನಹಳ್ಳಿ, ತೊರ್ನಹಳ್ಳಿ, ಸೊಣ್ಣನಾಯಕನಹಳ್ಳಿಯ ಗ್ರಾಮಗಳ ನಿವಾಸಿಗಳು ಚುನಾವಣೆ ಬಹಿಷ್ಕರಿಸಿದ್ದಾರೆ. ಕೆಸಿ ವ್ಯಾಲಿ ಗ್ರಾಮದ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲಾಡಳಿತ ನೀರು ಹರಿಸದಿದ್ದರೆ ನಾಳೆ ಮತದಾನ ಮಾಡುವುದಿಲ್ಲ ಎಂದು ನಿವಾಸಿಗಳು ಎಚ್ಚರಿಸಿದ್ದಾರೆ.
ನೀರು ಹರಿಸದಿದ್ದರೆ ನಾಳೆ ಲೋಕಸಭೆ ಚುನಾವಣೆಯಲ್ಲಿ ನಾವು ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.