ಲೋಕಸಭಾ ಚುನಾವಣೆ 2024: ಇಂದು ವಯನಾಡಿನಲ್ಲಿ “ರಾಗಾ” ಭವಿಷ್ಯ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಮಾತ್ರವಲ್ಲದೆ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಖಾಡಕ್ಕಿಳಿದಿರುವ ವಯನಾಡಿನಲ್ಲಿ ಮತದಾನ ನಡೆಯುತ್ತಿದ್ದು, ಇಂದು ಅವರ ಭವಿಷ್ಯ ನಿರ್ಧಾರವಾಗಲಿದೆ.

ಕೇರಳದ ತಿರುವನಂತಪುರ ಕ್ಷೇತ್ರದ ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಕಣದಲ್ಲಿದ್ದಾರೆ. ಹಾಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ವಿರೋಧಿಸುತ್ತಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದ್ದು ಎಲ್ಲರೂ ತಪ್ಪದೇ ಮತದಾನ ಚಲಾಯಿಸಿ. ನಿಮ್ಮ ಮತ, ನಿಮ್ಮ ಹಕ್ಕು. ದೇಶದ ಬೆಳವಣಿಗೆಗೆ ನಿಮ್ಮೆಲ್ಲರ ಅಮೂಲ್ಯವಾದ ಮತ ಬಹಳ ಮುಖ್ಯ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!