ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಶಿಕಾರಿಪುರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮತಯಾಚನೆ ಮಾಡಿದರು.
ಬಿಎಸ್ ಯಡಿಯೂರಪ್ಪ ಪ್ರಕಾರ ಕರ್ನಾಟಕದಲ್ಲಿ 25 ರಿಂದ 26 ಸ್ಥಾನದಲ್ಲಿ ಗೆಲ್ಲುತ್ತೇವೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಜನರು ಬಯಸುತ್ತಿದ್ದಾರೆ. ಈ ಬಾರಿ ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.