ಲೋಕಸಭೆ ಚುನಾವಣೆ 2024: ಕರ್ನಾಟಕದ 14 ‘ಲೋಕ’ ಕ್ಷೇತ್ರಗಳಲ್ಲಿ ಮತದಾನ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಬೆಳಗ್ಗೆ 7:00 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮತದಾನ ಆರಂಭವಾಗಿದೆ.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳು ಸೇರಿದಂತೆ ದೇಶಾದ್ಯಂತ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!