ಲೋಕಸಭಾ ಚುನಾವಣೆ 2024: 14 ಕ್ಷೇತ್ರಗಳಿಗೆ ನಾಳೆ ಮತದಾನ, ಬೆಳಗ್ಗೆ 7 ಗಂಟೆಯಿಂದ ವೋಟಿಂಗ್ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ನಾಳೆ ಮೊದಲ ಹಂತದ ಚುನಾವಣೆಯ ಮತದಾನ ಆರಂಭವಾಗಲಿದೆ. ಒಟ್ಟಾರೆ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಲಿದೆ.

ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯಲಿದೆ.

ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆ, ರಾಜ್ಯ‌ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನದಲ್ಲಿ ಪುರಷರಿಗಿಂತ ಮಹಿಳೆಯರು ಹೆಚ್ಚು ಮತದಾರರಿದ್ದಾರೆ. ಮತಗಟ್ಟೆಯಿಂದ 200 ಮೀಟರ್ ದೂರದಲ್ಲಿ ಏಜೆಂಟ್‌ಗಳು ಕೂರಬಹುದು. ಮಾಧ್ಯಮದಲ್ಲಿ ಯಾವುದೇ ಸರ್ವೆಗೆ ಅವಕಾಶ‌ವಿಲ್ಲ ಎಂದಿದ್ದಾರೆ.

ನಾಳೆಯಿಂದ ಚುನಾವಣೆ ಇರುವ ಕಾರಣ ನಿನ್ನೆ (ಏ.24)ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದಿನಿಂದ ಬರೀ ಮನೆಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!