ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದೆ. ರಾಜಸ್ಥಾನದ ೪ ಕ್ಷೇತ್ರ ಹಾಗೂ ತಮಿಳುನಾಡಿನ ಒಂದು ಕ್ಷೇತ್ರಕ್ಕೆ ಟಿಕೆಟ್ ಅಂತಿಮಗೊಳಿಸಲಾಗಿದೆ.

ತಮಿಳುನಾಡು ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 9 ಸ್ಥಾನಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ಒಂದು ಸ್ಥಾನ ಬಾಕಿ ಉಳಿಸಿಕೊಂಡಿದೆ. 6ನೇ ಪಟ್ಟಿಯಲ್ಲಿ ತಮಿಳುನಾಡಿನ ತಿರುನೇಲ್ವೆಲಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಲಾಗಿದೆ. ವಕೀಲ ಸಿ ರಾಬರ್ಟ್ ಬ್ರೂಸ್‌ಗೆ ಟಿಕೆಟ್ ನೀಡಲಾಗಿದೆ.

ಇನ್ನು ರಾಜಸ್ಥಾನದ ಅಜ್ಮೆರ್ ಕ್ಷೇತ್ರಕ್ಕೆ ರಾಮಚಂದ್ರ ಚೌಧರಿಗೆ ಟಿಕೆಟ್ ನೀಡಲಾಗಿದೆ. ನಾಯಕ ಸುದರ್ಶನ್ ರಾವತ್‌ಗೆ ರಾಜಮಸಂದ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಬಿಲ್ವಾರಾ ಕ್ಷೇತ್ರದಿಂದ ಡಾ. ದಾಮೋದರ್ ಗುರ್ಜರ್, ಕೋಟಾ ಕ್ಷೇತ್ರದಿಂದ ಪ್ರಹ್ಲಾದ್ ಗುಂಜಾಲ್‌ಗೆ ಟಿಕೆಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!