ಲೋಕಸಭಾ ಚುನಾವಣೆ: ಏ.26 ಮತದಾನದ ದಿನ ಯಾರಿಗೆಲ್ಲ ಸಿಗಲಿದೆ ರಜೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮತದಾನ ಪ್ರತಿಯೊಬ್ಬರಿಗೂ ಕಡ್ಡಾಯ. ಆದರೆ, ಖಾಸಗಿ ಸಂಸ್ಥೆಗಳಿಗೆ ಕಡ್ಡಾಯ ರಜೆ ಇಲ್ಲ, ಸರ್ಕಾರಿ ಸಂಸ್ಥೆಗಳು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬ್ಯಾಂಕ್‌ಗಳು, ಶಾಲೆಗಳು, ಕಾಲೇಜುಗಳು ಮತ್ತು ಕೆಲವು ಸರ್ಕಾರಿ ಸಂಸ್ಥೆಗಳು ಚುನಾವಣಾ ದಿನವಾದ ಏಪ್ರಿಲ್ 26 ಅನ್ನು ರಜೆ ಎಂದು ಘೋಷಿಸಿವೆ. ಬಸ್ಸುಗಳು, ರೈಲುಗಳು, ಆಸ್ಪತ್ರೆಗಳು, ಔಷಧಾಲಯಗಳು ಮತ್ತು ಖಾಸಗಿ ಸಂಸ್ಥೆಗಳಂತಹ ಅಗತ್ಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಂಪನಿಗಳಿಗೆ ಕಡ್ಡಾಯ ರಜೆ ಇಲ್ಲ.

ಇನ್ನು ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ವೋಟ್ ಹಾಕಿ ಕಚೇರಿಗೆ ಬರಬಹುದು. ಮೊದಲ ಪಾಳಿಯಿದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ಮತದಾನ ಮಾಡಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!