ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದೆ. ಯಾವ ರಾಜ್ಯಗಳಲ್ಲಿ ಎಷ್ಟು ಅಭ್ಯರ್ಥಿಗಳನ್ನು ಘೋಷಿಸಬೇಕು ಎಂಬ ಚರ್ಚೆ ಶುರುವಾಗಿದೆ. ಈಗ ಇದಕ್ಕೆ ಪೂರಕ ಎಂಬಂತೆ AAP ಪಕ್ಷವು ಮೂರು ರಾಜ್ಯಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಆಪ್ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿರುವ ಬೆನ್ನಲೇ ಇದೀಗ ವಿರೋಧ ಪಕ್ಷಗಳ ಮೈತ್ರಿಕೂಟ I.N.D.I.Aದ ಒತ್ತಡ ಮತ್ತಷ್ಟು ತೀವ್ರವಾಗಿದೆ. ಆಮ್ ಆದ್ಮಿ ಪಕ್ಷವು ಈಗಾಗಲೇ ಗುಜರಾತ್ ನಲ್ಲಿ ಎರಡು ಹಾಗೂ ಗೋವಾದಲ್ಲಿ ಒಂದು ಸ್ಥಾನ ಪಡೆಯುವ ಮೂಲಕ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದಿಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಈ ನಿರ್ಧಾರವನ್ನು ತೀರ್ಮಾನಿಸಲಾಗಿದೆ.
ಈಗಾಗಲೇ ಆಪ್ ಪಕ್ಷವು ದಿಲ್ಲಿಯಲ್ಲಿ ಏಳು ಲೋಕಸಭಾ ಸ್ಥಾನಗಳ ಪೈಕಿ ಒಂದು ಸ್ಥಾವನ್ನು ಮಾತ್ರ ಕಾಂಗ್ರೆಸ್ ಗೆ ಬಿಟ್ಟುಕೊಡುವುದಾಗಿ ಮೊದಲೇ ಸೂಚಿಸಿತ್ತು. ಇನ್ನು ಕಳೆದ ವಾರ ಅಸ್ಸಾಂನ ಗುವಾಹಟಿ, ಸೋನಿತ್‌ಪುರ ಮತ್ತು ದಿಬ್ರುಗಢ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಏಕಪಕ್ಷೀಯವಾಗಿ ಘೋಷಿಸಿದ್ದ ಆಪ್ ಪಕ್ಷವು, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಈ ರಣತಂತ್ರ ರೂಪಿಸಿದೆ ಎನ್ನಲಾಗಿದೆ.