ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಈ ಮಹತ್ವದ ಬೆಳವಣಿಗೆ ನಡೆದಿದೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ವಿಜೇಂದರ್ ಸಿಂಗ್ 2019 ರ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು. ಇದೀಗ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದು, ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ.