ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಯಾವಾಗ ಬೇಕಾದರೂ ಲೋಕಸಭೆ ಚುನಾವಣೆ ನಡೆಯಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ಒಗ್ಗಟ್ಟಿನಿಂದ ಬಿಜೆಪಿಗೆ ಹೆಚ್ಚು ನಷ್ಟವಾಗುವ ಭೀತಿಯಿಂದಾಗಿ ಕೇಂದ್ರ ಸರ್ಕಾರವು ಅವಧಿಪೂರ್ವ ಲೋಕಸಭೆ ಚುನಾವಣೆಗೆ ಹೋಗಬಹುದು ಎಂದು ಕಳೆದ ಏಳೆಂಟು ತಿಂಗಳಿಂದ ನಾನು ಹೇಳುತ್ತಿದ್ದೇನೆ. ಆದ್ದರಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳು ಒಗ್ಗೂಡಬೇಕು. ಕೆಲವರು ದೇಶದಲ್ಲಿ ಏನು ಬೇಕಾದರೂ ಮಾಡಲು ಸಮರ್ಥರಾಗಿದ್ದಾರೆ’ಎಂದು ಅವರು ಹೇಳಿದರು.
ನಾವು ಮುಂಬೈಗೆ ಹೋಗುತ್ತಿದ್ದೇವೆ ಮತ್ತು ದೇಶದ ಗರಿಷ್ಠ ಸಂಖ್ಯೆಯ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ನನ್ನ ಕೈಯಲ್ಲಿದೆ.ಆದ್ರೆ ವೈಯಕ್ತಿಕವಾಗಿ, ನನಗೆ ಯಾವುದೇ ಹುದ್ದೆಯಲ್ಲಿ ಆಸಕ್ತಿ ಇಲ್ಲ. ನಾನು ನಿನ್ನೆ ಅದನ್ನೇ ಹೇಳಿದ್ದೆ ಮತ್ತು ಇಂದು ಕೂಡ ಅದನ್ನೇ ಪುನರಾವರ್ತಿಸುತ್ತಿದ್ದೇನೆ ಎಂದು ಹೇಳಿದರು.