ಲೋಕಸಭಾ ಚುನಾವಣೆ: ಕೇರಳದಲ್ಲಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು ಮೈತ್ರಿ ಪಕ್ಷಗಳಿಗೆ 4 ಸ್ಥಾನಗಳನ್ನು ನೀಡಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.

ಕೇರಳದಲ್ಲಿ ಕಾಂಗ್ರೆಸ್‌ ಇತರೆ ಪಕ್ಷಗಳೊಂದಿಗೆ ಸೇರಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಒಕ್ಕೂಟ ರಚಿಸಿಕೊಂಡಿದೆ.

ಬುಧವಾರ ಈ ಬಗ್ಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಹಾಗೂ ಯುಡಿಎಫ್‌ ಅಧ್ಯಕ್ಷ ವಿ.ಡಿ ಸತೀಶನ್‌ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) 2 ಸ್ಥಾನ, ಕೇರಳ ಕಾಂಗ್ರೆಸ್‌ ಜೆ ಹಾಗೂ ಆರ್‌ಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ ಎಂದರು.

ಐಯುಎಂಎಲ್ ಮತ್ತೊಂದು ಸ್ಥಾನಕ್ಕೆ ಬೇಡಿಕೆ ಇಟ್ಟಿದೆ.ಐಯುಎಂಎಲ್ ಬೇಡಿಕೆ ಇಟ್ಟಿರುವುದನ್ನು ಕಾಂಗ್ರೆಸ್‌ ಪರಿಗಣಿಸಿದೆ. ಈ ಬಗ್ಗೆ ಮುಂದೆ ಚರ್ಚೆ ಮಾಡಿ ಅಂತಿಮಗೊಳಿಸಲಾಗುವುದು ಎಂದು ಸತೀಶನ್‌ ಹೇಳಿದ್ದಾರೆ.
ಕೇರಳದಲ್ಲಿ 20 ಲೋಕಸಭಾ ಸ್ಥಾನಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!