ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರಿಗೆ ಹಂಚಲು ಕುಕ್ಕರ್‌ಗಳನ್ನು ಸಂಗ್ರಹಿಸಿ ಇಡಲಾಗಿದೆ ಎನ್ನುವ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ತುಮಕೂರಿನ ಕುಣಿಗಲ್‌ನ ಗೋಡೌನ್ ಮೇಲೆ ದಾಳಿ ಮಾಡಿದ್ದಾರೆ.
ಗೋಡೌನ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಶಾಸಕ ರಂಗನಾಥ್ ಫೋಟೊ ಇದೆ.
ಜೆಡಿಎಸ್ ಕಾರ್ಯಕರ್ತರು ಕುಕ್ಕರ್ ಇರುವ ಬಗ್ಗೆ ಮಾಹಿತಿ ನೀಡಿದ್ದು, ಏಕಾಏಕಿ ದಾಳಿ ಮಾಡಿದಾಗ ಕುಕ್ಕರ್ ಸಿಕ್ಕಿದ್ದು, ಅದನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.