ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿದ್ದು, ಪಂಜಾಬ್ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಭಾರತೀಯ ಕ್ರಿಕೆಟಿಗ ಶುಭ್ಮನ್ ಗಿಲ್ ಅವರನ್ನು ರಾಜ್ಯ ಐಕಾನ್ ಎಂದು ಘೋಷಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಶೇ. 70 ರಷ್ಟು ಮತದಾನವನ್ನು ಖಚಿತಪಡಿಸಿಕೊಳ್ಳಲು ಮತದಾರರಲ್ಲಿ ಜಾಗೃತಿ ಮೂಡಿಸಲು ಗಿಲ್ ವಿವಿಧ ಅಭಿಯಾನಗಳಲ್ಲಿ ಭಾಗವಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಸಿಬಿನ್ ಸಿ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿ ಪಂಜಾಬ್ನ 13 ಸ್ಥಾನಗಳಲ್ಲಿ ನಡೆದ 2019ಕ ಲೋಕಸಭೆ ಚುನಾವಣೆಯಲ್ಲಿ ಶೇ. 65.96 ಮತದಾನವಾಗಿತ್ತು. ಈ ಬಾರಿ ಚುನಾವಣಾ ಆಯೋಗ ಶೇ. 70 ರಷ್ಟು ಮತದಾನದ ಗುರಿ ಹೊಂದಿದೆ.
ಕ್ರೀಡಾ ಉತ್ಸಾಹಿಗಳಲ್ಲಿ, ವಿಶೇಷವಾಗಿ ಯುವಕರಲ್ಲಿ ಜನಪ್ರಿಯರಾಗಿರುವ ಪಂಜಾಬ್ ನಿವಾಸಿ ಗಿಲ್ ಅವರನ್ನು ಚುನಾವಣೆಗೆ “ರಾಜ್ಯ ಐಕಾನ್” ಆಗಿ ನೇಮಿಸಲಾಗಿದೆ ಎಂದು ಸಿಇಒ ಹೇಳಿದ್ದಾರೆ.