ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನಾಂಕ ಘೋಷಣೆಗೂ ಮುನ್ನವೇ ದೇಶದಲ್ಲಿ ಲೋಕಸಭಾ ಚುನಾವಣೆ ಭರ್ಜರಿ ಕಾವೇರಿಸಿದ್ದು, ಈ ಬಾರಿ ಬರೋಬ್ಬರಿ 96 ಕೋಟಿ ಮತದಾರರು ಹಕ್ಕು ಚಲಾಯಿಸಲು ಅರ್ಹತೆ ಹೊಂದಿದ್ದಾರೆ.
ಕಳೆದ ಚುನಾವಣೆಗೆ ಹೋಲಿಸಿದರೆ ದೇಶದಲ್ಲಿ ಮತದಾರರ ಸಂಖ್ಯೆ ಐದು ಕೋಟಿ ಹೆಚ್ಚಳವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಮತದಾರರ ಸಂಖ್ಯೆ 91 ಕೋಟಿಯಷ್ಟಿತ್ತು.
ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವೂ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ದೇಶದಾದ್ಯಂತ ಸುಮಾರು 12 ಲಕ್ಷ ಮತದಾನ ಕೇಂದ್ರಗಳನ್ನು ಸ್ಥಾಪಿಸಲಿದೆ.