ಲೋಕಸಭೆ ಚುನಾವಣೆ: ಜನರಿಗಾಗಿ ಮೆಟ್ರೋ ಸೇವೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭೆ ಚುನಾವಣೆ ಭಾಗವಾಗಿ ಬೆಂಗಳೂರಿನಲ್ಲಿ ಏಪ್ರಿಲ್​​ 26ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.

2024 ಏಪ್ರಿಲ್​​ 26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಎಲ್ಲಾ ನಾಲ್ಕು ಟರ್ಮಿನಲ್​ಗಳಲ್ಲಿ ಸಮಯ ವಿಸ್ತರಣೆ ಮಾಡಲಾಗಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ ಚಲ್ಲಘಟ್ಟ ವೈಟ್ ಫೀಲ್ಡ್​ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55ಕ್ಕೆ ವಿಸ್ತರಿಸಲಾಗಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು2024 ಜುಲೈ 27 ರಂದು 12.35ಕ್ಕೆ ಮಧ್ಯರಾತ್ರಿ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!