ಲೋಕಸಭಾ ಚುನಾವಣೆ: ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ, ಎಷ್ಟು ದಿನ? ಇಲ್ಲಿದೆ ಡೀಟೇಲ್ಸ್

ಹೊಸದಿಗಂತ ಮಡಿಕೇರಿ:

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಏ.26ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಏ.24ರ ಸಂಜೆ 5ಗಂಟೆಯಿಂದ 26ರ ಮಧ್ಯರಾತ್ರಿ 12ಗಂಟೆಯವರೆಗೆ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಜೂ.3ರ ಮಧ್ಯರಾತ್ರಿ 12ಗಂಟೆಯಿಂದ ಜೂನ್.4ರ ಮಧ್ಯರಾತ್ರಿ 12ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್‌ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಮೇಲೆ ತಿಳಿಸಿದ ಅವಧಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯಗಳ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!