ಲೋಕಸಭಾ ಚುನಾವಣೆ: ಅತೀ ಶೀಘ್ರದಲ್ಲೇ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಮೂರುನಾಲ್ಕು ದಿನಗಳಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ‌ ಬೆಳಗ್ಗೆ ಮಾತನಾಡಿದ ಅವರು, ಈಗಾಗಲೇ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರ ನೇಮಕ ಮಾಡಲಾಗಿತ್ತು. ಶೇ75 ರಷ್ಟು ಕ್ಷೇತ್ರಗಳಲ್ಲಿ ಕಾರ್ಯಕರ್ತರ ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ದ ಮಾಡಿಕೊಂಡಿದ್ದು, ವರದಿ ಇನ್ನೂ ನೀಡಿಲ್ಲ ಎಂದರು.

ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲಿದೇ ಅಸಮಾಧಾನ ಎಂದು ಪ್ರಶ್ನಿಸಿದರು. ಬಿಜೆಪಿ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆಯಾಗಿ ಐದು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾಡದ ಪಕ್ಷ ಬಿಜೆಪಿ ಎಂದು ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!