ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಕಾವು ಹೆಚ್ಚುತ್ತಿದ್ದು, ಎಲ್ಲಡೆ ಭರ್ಜರಿ ಪ್ರಚಾರಗಳು ನಡೆಯುತ್ತಿದೆ. ಇದರ ನಡುವೆ ಬಿಜೆಪಿ ತನ್ನ ಪ್ರಣಾಳಿಕೆ ‘ಸಂಕಲ್ಪ ಪತ್ರ’ ವನ್ನು ಭಾನುವಾರ(ಏ.14) ಬಿಡುಗಡೆ ಮಾಡಲಿದೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬಿಜೆಪಿಯು ಪ್ರಣಾಳಿಕೆ ಸಮಿತಿಯನ್ನು ರಚಿಸಿತ್ತು. ಪ್ರಣಾಳಿಕೆಗೆ ಸಂಬಂಧಿಸಿದಂತೆ ದೇಶದ ಜನರ ಸಲಹೆಗಳನ್ನು ಪಡೆಯುವ ಕುರಿತಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಲಹೆ ನೀಡುವಂತೆ ಜನರಿಗೆ ತಿಳಿಸಿತ್ತು.