ಲೋಕಸಭೆ ಚುನಾವಣೆ: ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಫೆ.19ರಿಂದ ಕ್ಷೇತ್ರ ಪ್ರವಾಸ ಆರಂಭಿಸಲಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ವಿರುದ್ಧ ಸೋತಿದ್ದ ನಿಖಿಲ್, ಇದೀಗ ಸೋತ ಕ್ಷೇತ್ರದಲ್ಲೇ ಗೆಲ್ಲುವ ಉದ್ದೇಶದಿಂದ ಮಂಡ್ಯದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ ಎನ್ನಲಾಗಿದೆ.

ಒಟ್ಟು 8 ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳಲಿದ್ದು, ಮದ್ದೂರು ಕ್ಷೇತ್ರದಿಂದ ತಮ್ಮ ಮೊದಲ ಪ್ರವಾಸ ಆರಂಭಿಸಲಿದ್ದಾರೆ. ಆದರೆ ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಆದರೆ, ಸ್ಥಳೀಯ ಮುಖಂಡರು ಎಚ್‌.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಮೂವರೊಳಗೆ ಒಬ್ಬರು ಸ್ಪರ್ಧಿಸಬೇಕು ಎಂದು ಒತ್ತಾಯಿಸಿ ಒಮ್ಮತದ ನಿರ್ಣಯ ಕೈಗೊಂಡಿದ್ದೇವೆ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್‌ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!