ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭೆಯ 57 ಸ್ಥಾನಗಳಿಗೆ ಮತದಾನ ನಡೆಯಲಿರುವ 7ನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. ಪ್ರಧಾನಿ ಮೋದಿ ಮೇ.14ರಂದು ವಾರಣಾಸಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ.

2024ರ ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನವು ಜೂನ್ 1ರಂದು 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿದೆ. ಚುನಾವಣಾ ಆಯೋಗವು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಅಧಿಸೂಚನೆ ಹೊರಡಿಸಿದೆ.

ಅಧಿಸೂಚನೆಯ ಪ್ರಕಾರ, ಮೇ 14ರಂದು ನಾಮಪತ್ರ ಸಲ್ಲಿಸಲು ಗಡುವು ಎಂದು ನಿಗದಿಪಡಿಸಲಾಗಿದ್ದು, ಮೇ 15ರಂದು ನಾಮಪತ್ರಗಳ ಪರಿಶೀಲನೆಗೆ ದಿನವನ್ನು ನಿಗದಿಪಡಿಸಲಾಗಿದೆ. ಚುನಾವಣೆಯ ಅಭ್ಯರ್ಥಿಗಳು ಮೇ 17ರವರೆಗೆ ಚುನಾವಣಾ ಕಣದಿಂದ ಹಿಂದೆ ಸರಿಯಲು ಅವಕಾಶವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!