ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿ, ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಅವರ ರೋಡ್ ಶೋನಲ್ಲಿ ಭಾರಿ ಜನರು ಭಾಗಿಯಾಗಿದ್ದರು.
ವಯನಾಡಿನಿಂದ ಭಾರತೀಯ ಜನತಾ ಪಕ್ಷ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ವಯನಾಡ್ನಿಂದ ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕಿ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ನಿಂದ ಗೆದ್ದಿದ್ದಾರೆ.