ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಅಂಗವಾಗಿ ಜ.6 ರಿಂದ ಶಿವಸಂಕಲ್ಪ ಅಭಿಯಾನದ ಮೂಲಕ ರಾಜ್ಯದ ಎಲ್ಲಾ 48 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 2024ರ ಮೊದಲ ಭಾಗದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ಬಿಜೆಪಿ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣವನ್ನು ಒಳಗೊಂಡಿರುವ ಆಡಳಿತಾರೂಢ ಮೈತ್ರಿಕೂಟ ಅಥವಾ ‘ಮಹಾಯುತಿ’ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು.
ಶಿವಸಂಕಲ್ಪ ಯಾತ್ರೆಯು ಜ. 6ರಿಂದ ಯವತ್‌ಮಾಲ್-ವಾಶಿಂ ಕ್ಷೇತ್ರದಿಂದ ಆರಂಭವಾಗಲಿದೆ. ಶಿಂಧೆ ಅವರು ಒಂದು ತಿಂಗಳವರೆಗೆ ರಾಜ್ಯ ವಿವಿಧ ಭಾಗಗಳಲ್ಲಿ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷ ಹೇಳಿದೆ.