ಲೋಕಸಭಾ ಚುನಾವಣೆ: ರಾಜ್ಯ ಬಿಜೆಪಿ ಮಾಧ್ಯಮ ಕಾರ್ಯಾಗಾರ

ಹೊಸದಿಗಂತ ವರದಿ,ಬೆಂಗಳೂರು:

ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಕಾರ್ಯಾಗಾರ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಚುನಾವಣೆ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕೋಷ್ಠದ ಜವಾಬ್ದಾರಿ ಅತ್ಯಂತ ಮಹತ್ವದ್ದು ಎಂದು ತಿಳಿಸಿದರು.

ರಾಷ್ಟ್ರೀಯ ವಕ್ತಾರರಾದ ಸೈಯದ್ ಜಫರ್ ಇಸ್ಲಾಂ, ತೂಹಿನ್ ಸಿನ್ಹಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಉಪಸ್ಥಿತರಿದ್ದರು. ರಾಜ್ಯ ವಕ್ತಾರರು, ಪಕ್ಷದ ಮುಖಂಡರು ಮತ್ತು ಅಪೇಕ್ಷಿತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!