ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮ?

ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮವಾಗುವ ಸಾಧ್ಯತೆ ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾ. 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ಹೇಳಿದರು.
ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು ಮಾ.೨೧ರಂದು ನಡೆಸಲು ಉದ್ದೇಶಿಸಲಾಗಿದೆ ಎಂದ ಅವರು, ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು. ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!