ಲೋಕಸಭೆಯಲ್ಲಿ ‘ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ 2021’ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಸರ್ಕಾರದಿಂದ ಲೋಕಸಭೆಯಲ್ಲಿ ಇಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆ 2021 ಅನ್ನು ಮಂಡಿಸಲಾಗಿತ್ತು.
ಈ ಮೂಲಕ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದೆ.
ಈ ಮಸೂದೆ ಮಂಡನೆಯ ವೇಳೆಯಲ್ಲಿ ಮಾತನಾಡಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು, ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆಯು ಭಾರತದ ಖ್ಯಾತಿಯನ್ನು ಹೆಚ್ಚಿಸುತ್ತದೆ. ದೇಶವು ವಿಶೇಷ ಕಾನೂನುಗಳು ಮತ್ತು ಡೋಪಿಂಗ್ ವಿರೋಧಿ ಪರೀಕ್ಷಾ ಸೌಲಭ್ಯಗಳನ್ನು ಹೊಂದಿರುತ್ತದೆ. ನಾವು ಡೋಪಿಂಗ್ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಬೇಕು ಮತ್ತು ಡೋಪಿಂಗ್ನ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!