ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿದ ಶಾಸನಬದ್ಧ ನಿರ್ಣಯವನ್ನು ಲೋಕಸಭೆಯಲ್ಲಿ ಇಂದು ಅಂಗೀಕರಿಸಲಾಯಿತು. ಎಲ್ಲಾ ಸಂಸದರು ಪಕ್ಷಾತೀತವಾಗಿ ಈ ನಿರ್ಣಯವನ್ನು ಬೆಂಬಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುತ್ತಾ , ಪ್ರಕ್ಷುಬ್ಧ ಈಶಾನ್ಯ ರಾಜ್ಯದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.ಕಳೆದ ನಾಲ್ಕು ತಿಂಗಳುಗಳಲ್ಲಿ ಮಣಿಪುರದಲ್ಲಿ ಯಾವುದೇ ಹಿಂಸಾಚಾರ ನಡೆದಿಲ್ಲ. ಶಾಂತಿ ಸ್ಥಾಪಿಸಲು ಮೈತೈ ಮತ್ತು ಕುಕಿ ಸಮುದಾಯಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಅಮಿತ್ ಶಾ ತಿಳಿಸಿದರು.
ಜನರು ಶಿಬಿರಗಳಲ್ಲಿ ಇರುವವರೆಗೆ, ಪರಿಸ್ಥಿತಿ ತೃಪ್ತಿಕರವಾಗಿದೆ ಎಂದು ನಾನು ಹೇಳುವುದಿಲ್ಲ. ಮಣಿಪುರದಲ್ಲಿ ಶಾಂತಿ ಪುನಃಸ್ಥಾಪಿಸಲು ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.