ಹೊಸದಿಗಂತ ವರದಿ ವಿಜಯಪುರ:
ಇಲ್ಲಿನ ಕರ್ನಾಟಕ ಗೃಹ ಮಂಡಳಿ ಕಚೇರಿಯ ಪ್ರಥಮ ದರ್ಜೆ ಸಹಾಯಕನ ಎರಡು ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಗ್ಗೆ ಏಕಾಏಕಿ ದಾಳಿ ನಡೆಸಿ, ದಾಖಲಾತಿಗಳನ್ನು ಪರಿಶೀಲಿಸಿದ್ದಾರೆ.
ಕರ್ನಾಟಕ ಗೃಹ ಮಂಡಳಿ ಎಫ್‌ಡಿಎ ಶಿವಾನಂದ ಕೆಂಭಾವಿ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ. ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ ಹಾಗೂ ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದಲ್ಲಿ ಇರುವ ಫಾರ್ಮ್ ಹೌಸ್ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಡಿ. ಮಲ್ಲೇಶ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಡಿವೈಎಸ್ಪಿ ಸುರೇಶ ರೆಡ್ಡಿ, ಸಿಪಿಐ ಆನಂದ ಠಕ್ಕಣ್ಣನವರ ಹಾಗೂ ಸಿಬ್ಬಂದಿಗಳು ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.