‘ಲೋಕ’ ಅಖಾಡಕ್ಕೆ ಬಿ.ಎಲ್.ಸಂತೋಷ್ ಎಂಟ್ರಿ: ರೋಡ್ ಶೋ ಬಳಿಕ ಮಂಗಳೂರಿನಲ್ಲಿ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಧ್ಯಕ್ಷತೆಯಲ್ಲಿ ಇಂದು (ಏಪ್ರಿಲ್ 14) ರಾತ್ರಿ ಮಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಎಲ್.ಸಂತೋಷ್ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಬಳಿಕ ಮಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿ ಸಭೆ ನಡೆಸಿ ಸಂಘಟನೆ ಬಗ್ಗೆ ಚರ್ಚಿಸಲು ಸಭೆ ನಡೆಯಲಿದೆ. ರಾತ್ರಿ ಸಭೆ ನಡೆಯಲಿದೆ ಎಂದು ಹೇಳಲಾಗಿದ್ದರೂ ಇನ್ನೂ ನಿಖರವಾಗಿಲ್ಲ.

ಬಿ.ಎಲ್.ಸಂತೋಷ್ ಸೋಮವಾರ (ಏಪ್ರಿಲ್ 15) ಉಡುಪಿಯಲ್ಲಿ ಸಭೆ ನಡೆಸಲಿದ್ದಾರೆ. ಪಕ್ಷ ಸಂಘಟನೆಗೆ ಬಗ್ಗೆ ವಿವರಗಳನ್ನು ಪಡೆಯಲಿದ್ದಾರೆ. ಇದರ ಜೊತೆಗೆ ಮಂಗಳೂರಿನಲ್ಲಿ ಮತ್ತೊಂದು ಸಂಘಟನಾತ್ಮಕ ಸಭೆಯನ್ನು ನಡೆಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!