ಮಂಡ್ಯದಲ್ಲಿ ಲೋಕಾ ದಾಳಿ, ಲಕ್ಷ ಲಕ್ಷ ರೂ. ಮೌಲ್ಯದ ಎಕ್ಸ್‌ಪೈರ್ಡ್‌ ಮೆಡಿಸಿನ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಲಕ್ಷ ಲಕ್ಷ ರೂ. ಮೌಲ್ಯದ ಎಕ್ಸ್‌ಪೈರ್ಡ್‌ ಮೆಡಿಸಿನ್‌ ಪತ್ತೆಯಾಗಿದೆ.

ಕೊರೋನಾ ಭುಗಿಲೆದ್ದಿದ್ದ ಸಮಯದಲ್ಲಿ ಬಹುಬೇಡಿಕೆಯಲ್ಲಿದ್ದ 40 ಲಕ್ಷ ಮೌಲ್ಯದ ಅವಧಿ ಮುಗಿದಿರುವ ರೆಮ್ಡಿಸಿವರ್ ಎನ್ನುವ ಇಂಜೆಕ್ಷನ್‌ನ್ನು ವಶಪಡಿಸಿಕೊಳ್ಳಲಾಗಿದೆ. ಈ ಔಷಧಕ್ಕೆ ಒಂದರಿಂದ ಎರಡು ಲಕ್ಷ ರೂ. ಚಾರ್ಜ್‌ ಮಾಡಲಾಗುತ್ತಿತ್ತು.

ರೆಮ್ಡಿಸಿವರ್ ಮೆಡಿಸನ್ ಮಂಡ್ಯದ ಮಿಮ್ಸ್‌ನ ಔಷಧಿ ಉಗ್ರಾಣದಲ್ಲಿ ಇರುವುದು ಕಂಡುಬಂದಿದೆ. ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಅವಧಿಗೆ ಮೀರಿನ ಲಕ್ಷಾಂತರ ರೂಪಾಯಿಯ ಮೆಡಿಸಿನ್ ಇದ್ದು, ಅಧಿಕಾರಿಗಳು ಏಜೆನ್ಸಿಯವರೊಂದಿಗೆ ಮೆಡಿಕಲ್‌ ಮಾಫಿಯಾದಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಮಾಡುತ್ತಿದ್ದಾರೆ ಎಂದು ಕೇಶವಮೂರ್ತಿ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದರು. ದೂರಿನ ಅನ್ವಯ ಮಿಮ್ಸ್‌ನ ಔಷಧಿ ಉಗ್ರಾಣದ ಮೇಲೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.

ಈ ರೇಡ್‌ನಲ್ಲಿ ಪ್ರಮುಖವಾಗಿ ಕೊರೊನಾ ಕಾಲದಲ್ಲಿ ಬಹು ಬೇಡಿಕೆ ಇದ್ದ ರೆಮ್ಡಿಸಿವರ್ ಇಂಜೆಕ್ಷನ್ ಎಕ್ಸ್ಪೆರಿಯಾಗಿ ಇರೋದು ಕಂಡು ಬಂದಿದೆ. ಒಂದಲ್ಲಾ ಎರಡಲ್ಲಾ ಬರೋಬ್ಬರಿ 40 ಲಕ್ಷ ಮೌಲ್ಯದ ರೆಮ್ಡಿಸಿವರ್ ಇಂಜೆಕ್ಷನ್ ಅವಧಿ 2022ರಲ್ಲಿಯೇ ಮುಕ್ತಾಯವಾಗಿದೆ. ಕೊರೊನಾ ಸಂದರ್ಭದಲ್ಲಿ ಈ ಇಂಜೆಕ್ಷನ್ ಕೇಳಿದ್ರೆ ಮಿಮ್ಸ್‌ನ ಅಧಿಕಾರಿ ವರ್ಗ ನಮ್ಮ ಬಳಿ ಸ್ಟಾಕ್ ಇಲ್ಲ ಎಂಬ ಮಾತನ್ನು ಹೇಳುತ್ತಿತ್ತು. ಆದರೆ ಇದೀಗ ಅದೇ ರೆಮ್ಡಿಸಿವರ್ ಇಂಜೆಕ್ಷನ್ ಅಪಾರ ಮಟ್ಟದಲ್ಲಿ ಅವಧಿ ಮುಕ್ತಾಯಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!