ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಬೈರತಿ ಸುರೇಶ್ ಪಿಎಸ್ (ವೈಯಕ್ತಿಕ ಕಾರ್ಯದರ್ಶಿ) ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಮಾರುತಿ ಬಗಲಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ದಾಖಲೆಗಳು ಪತ್ತೆಯಾಗಿದೆ. ಈವರೆಗೆ 8 ನಿವೇಶನಗಳು, 5 ವಾಸ ಮನೆ, 19 ಎಕ್ರೆ ಜಮೀನಿನ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.