ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಟ ಕಮಲ್ ಹಾಸನ್ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಪಿ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷದ ಜೊತೆ ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯಂ ಮೈತ್ರಿ ಮಾಡಿಕೊಳ್ಳಲಿದ್ದು, ಲೋಕಸಭೆ ಚುನಾವಣೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ನನಗೆ ಯಾವುದೇ ಹುದ್ದೆ ಬೇಕಾಗಿಲ್ಲ, 2025ರ ರಾಜ್ಯಸಭಾ ಚುನಾವಣೆಯಲ್ಲಿ ಎಂಎನ್‌ಎಂಗೆ ಡಿಎಂಕೆ ಒಂದು ಸ್ಥಾನ ನೀಡಿದೆ ಎನ್ನಲಾಗಿದೆ. ಡಿಎಂಕೆ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಕಮಲ್ ಹಾಸನ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂಬ ಮಾಹಿತಿ ಇದೆ.