ಹೊಸದಿಗಂತ ವರದಿ ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಹಾಗೂ ಅರಣ್ಯ ಇಲಾಖೆ ಸಹಾಯಕ ಅರಣ್ಯ ಅಧಿಕಾರಿ ನಾಗೇಂದ್ರ ನಾಯ್ಕ್ ಅವರ ಮನೆಯ ಮೇಲೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಬೆಳ್ಳಿ, ಬಂಗಾರದ ಆಭರಣಗಳು ಪತ್ತೆಯಾಗಿವೆ.
ಸಹಾಯಕ ಅರಣ್ಯ ಅಧಿಕಾರಿ ನಾಗೇಂದ್ರ ನಾಯ್ಕ್ ಮನೆಯಲ್ಲಿ ಸುಮಾರು 600 ಗ್ರಾಂ ಚಿನ್ನ, 4 ಕೆ.ಜಿ. ಬೆಳ್ಳಿ ಹಾಗೂ 2 ಲಕ್ಷಕ್ಕೂ ಹೆಚ್ಚು ನಗದು ಹಣ ದೊರೆತಿದೆ. ಕೃಷ್ಣಮೂರ್ತಿ ಅವರ ಮನೆಯಲ್ಲೂ ಸಹ 600 ಗ್ರಾಂ ಚಿನ್ನ, 3 ಕೆ.ಜಿ. ಬೆಳ್ಳಿ ಹಾಗೂ ನಗದು ಪತ್ತೆಯಾಗಿದೆ ಎನ್ನಲಾಗಿದೆ.
ಹಿರಿಯೂರು ನಗರದ ಚಂದ್ರ ಲೇಔಟ್ನಲ್ಲಿನ ನಾಗೇಂದ್ರ ನಾಯ್ಕ್ ಅವರ ಮನೆ ತವಂದಿ ಬಳಿಯ ಫಾರ್ಮ್ಹೌಸ್ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಕುವೆಂಪು ನಗರದಲ್ಲಿರುವ ಕೃಷ್ಣಮೂರ್ತಿ ಅವರ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ.