April 10, 2026
Friday, April 10, 2026
spot_img

ಲಂಚ ಸ್ವೀಕರಿಸುವಾಗ ‘ಲೋಕಾ ದಾಳಿ’: ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ ಅಧಿಕಾರಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಖ್ಯಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು 2 ಲಕ್ಷ ರೂ ಬೇಡಿಕೆ ಇಟ್ಟಿದ್ದ ಅಧಿಕಾರಿ, ಮೊದಲ ಹಂತವಾಗಿ 1 ಲಕ್ಷ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಮಾಹಿತಿಯ ಪ್ರಕಾರ, ರಾಘವೇಂದ್ರ ರೆಡ್ಡಿ ಎಂಬ ವ್ಯಕ್ತಿಯಿಂದ ಈ-ಖಾತೆ ಮಾಡಿಕೊಡುವ ಹೆಸರಿನಲ್ಲಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ₹2 ಲಕ್ಷ ಲಂಚ ಕೇಳಿದ್ದರೆಂದು ಆರೋಪಿಸಲಾಗಿದೆ. ಅದರಂತೆ ಮುಂಗಡವಾಗಿ ₹1 ಲಕ್ಷ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ಹಿಡಿಯಲು ಮುಂದಾದರು.

ಇದನ್ನೂ ಓದಿ:

ದಾಳಿ ನಡೆಯುತ್ತಿರುವುದು ಗೊತ್ತಾಗುತ್ತಿದ್ದಂತೆ ಸುರೇಶ್ ಶೆಟ್ಟಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸಿರವಾರದಿಂದ ಕವಿತಾಳ ಕಡೆಗೆ ವಾಹನದಲ್ಲಿ ಪರಾರಿಯಾಗಲು ಪ್ರಯತ್ನಿಸಿದರೆಂದು ತಿಳಿದುಬಂದಿದೆ. ಆದರೆ ಸಿನಿಮೀಯ ಶೈಲಿಯ ಕಾರು ಚೇಸ್ ಮೂಲಕ ಲೋಕಾಯುಕ್ತ ತಂಡ ಅಧಿಕಾರಿಯನ್ನು ಬೆನ್ನಟ್ಟಿಕೊಂಡು ಬಂಧಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !