ಹೊಸ ದಿಗಂತ ವರದಿ, ಚಿತ್ರದುರ್ಗ:
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು. ಚಿತ್ರದುರ್ಗದ ಮೆದೇಹಳ್ಳಿ ರಸ್ತೆ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲಿಸಿದ್ದಾರೆ.
ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸುಶೀಲಮ್ಮ ಕಳೆದ ಒಂದು ವರ್ಷದ ಹಿಂದೆ ಸ್ವಯಂ ನಿವೃತ್ತಿ ಪಡೆದಿದ್ದರು.
ಇವರ ಬಳಿ ೧೧ ನಿವೇಶನಗಳು, ೩೦ ಎಕರೆ ಜಮೀನು, ೬ ಮನೆಗಳು, ೧ ಕಾಂಪ್ಲೆಕ್ಸ್ ೪೩ ಲಕ್ಷ ಮೌಲ್ಯದ ವಾಹನ ಸೇರಿದಂತೆ ೮ ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆಯಾಗಿದೆ.



