ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇದೇ ವೇಳೆ ಕೈ ಪಾಳಯದಲ್ಲಿ ಆಪರೇಷನ್ ಹಸ್ತ ಮೌನವಾಗಿ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬಾಂಬೆ ಬಾಯ್ಸ್ಗೆ ಗಾಳ ಹಾಕಿರುವ ಡಿಕೆಶಿ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಮೇಲೂ ಕಣ್ಣಿಟ್ಟಿರುವ ಅವರು ಗೆಲುವಿನ ಪಣತೊಟ್ಟಿದ್ದಾರೆ. ಅದಕ್ಕಾಗಿಯೇ ಅವರು ಬಾಂಬೆ ಬಾಯ್ಸ್ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿ ಶಾಸಕರಾಗಿರುವವರ ಜೊತೆ ಡಿಕೆಶಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾಯಕರೇ ಇದೀಗ ಡಿಕೆಶಿ ಅವರು ಟಾರ್ಗೆಟ್ ಮಾಡಿದ್ದಾರೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳನ್ನು ಗೆಲ್ಲಲು ಡಿಕೆ ಶಿವಕುಮಾರ್ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗಿದೆ.