ಚಿಕ್ಕಮಗಳೂರಿನ ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ಲೋಕಾ ದಾಳಿ

ಹೊಸದಿಗಂತ ವರದಿ ಚಿಕ್ಕಮಗಳೂರು :

ಇಲ್ಲಿನ ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ಅವರ ನಿವಾಸದ ಮೇಲೆ ಲೋಕಾಯುಕ್ತ ಸಿಬ್ಬಂದಿ ದಾಳಿನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.

ನಗರದ ಜಯನಗರ ಬಡಾವಣೆಯಲ್ಲಿರುವ ನಿವಾಸದಮೇಲೆ ಮುಂಜಾನೆಯೇ ಲೋಕಾಯುಕ್ತ ಎಸ್ಪಿ ಸ್ನೇಹ ಮತ್ತು ಡಿವೈಎಸ್ಪಿ ತಿರುಮಲೇಶ್ ನೇತೃತ್ದ ಎರಡು ತಂಡ ದಾಳಿ ನಡೆಸಿದೆ.
ಲತಾಮಣಿ ಅವರ ಪತಿ ಚಂದ್ರಶೇಖರ್ ಸಹ ನಿರ್ಮಿತಿ ಕೇಂದ್ರದ ಇಂಜಿನೀಯರ್ ಆಗಿದ್ದಾರೆ. ಲತಾಮಣಿ ವಿರುದ್ಧ ಸಾರ್ವಜನಿಕ ದೂರುಗಳಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಲೋಕಾಯುಕ್ತ ಕಾರ್ಯಾಚರಣೆ ವೇಳೆ ಚಿನ್ನ, ಬೆಳ್ಳಿ ಆಭರಣಗಳು ಮತ್ತು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!