ಲೋಕಾಯುಕ್ತ ದಾಳಿ: ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ವಿರುದ್ಧ ಎಫ್​ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಪುತ್ರ ಮಾಡಾಳ್ ಪ್ರಶಾಂತ್‌ ಲೋಕಾಯುಕ್ತ (Lokayukta Raid) ಬಲೆಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಬೆನ್ನಲ್ಲೇ ಲಂಚ ಸ್ವೀಕಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷ ಸೇರಿದಂತೆ ಮತ್ತಿತರರ ವಿರುದ್ಧ ಎಫ್​ಐಆರ್ (FIR) ದಾಖಲಿಸಿದ್ದಾರೆ.

ಶ್ರೇಯಸ್ ಕಶ್ಯಪ್​ ನೀಡಿದ್ದ ದೂರಿನ ಅನ್ವಯ ದಾಖಲಾದ ಎಫ್​ಐಆರ್​ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 (ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2 (2ನೇ ಆರೋಪಿ), ಕೆಎಸ್​ಡಿಎಲ್​ ಅಕೌಂಟೆಂಟ್​ ಸುರೇಂದ್ರ ಎ3, ಮಾಡಾಳ್​ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾನೆ. ಎಫ್​ಐಆರ್ ದಾಖಲಿಸಲಾಗಿದೆ.

ತಮ್ಮ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ ಶಾಸಕರಿಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ವಿರೂಪಾಕ್ಷಪ್ಪ ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರು ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ. ಚನ್ನೇಶಪುರ ಗ್ರಾಮದಲ್ಲಿರುವ ಶಾಸಕರ​ ನಿವಾಸ, ಮಾವಿನಹೊಳೆ ಬಳಿ ಇರುವ ಮಾಡಾಳ್ ಕುಟುಂಬದ ಕ್ರಷರ್ ಕಚೇರಿ, ಮಾವಿನಕಟ್ಟೆ ಗ್ರಾಮದ ಬಳಿ ಇರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, 20 ಮಂದಿಯಿಂದ ಪರಿಶೀಲನೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!