ಬಳ್ಳಾರಿ ಆರ್​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಳ್ಳಾರಿ ಆರ್​ಟಿಒ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ
ಲಂಚ ಪಡೆಯುತ್ತಿದ್ದ ಆರ್​ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ ಮತ್ತು ಏಜೆಂಟ್ ಮೊಹಮ್ಮದ್​​​ನನ್ನು​ ವಶಕ್ಕೆ ಪಡೆದುಕೊಂಡಿದ್ದಾರೆ.

ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್.ಪಿ. ಶಶಿಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲಂಚ ಸ್ವೀಕರಿಸುವಾಗಲೇ ಲಂಚದ ಹಣ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!