ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಾದ್ಯಂದ ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಮನೆಯಲ್ಲಿ ಲಕ್ಷಾಂತರ ನಗದು ಪತ್ತೆಯಾಗಿದೆ. ಕೆಲ ದಿನಗಳ ಹಿಂದಷ್ಟೇ ಇವರ ವರ್ಗಾವಣೆಯಾಗಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು.

ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಬೀಳಗಿ ಸಹಾಯಕ ನಿರ್ದೇಶಕ ಕೃಷ್ಣ ಶಿರೂರ ಮನೆಯಲ್ಲಿ ದಾಳಿ ನಡೆದಿದೆ.

ಶಿವಮೊಗ್ಗ ಹಾಗೂ ಚಾಮರಾಜನಗರದಲ್ಲಿಯೂ ದಾಳಿ ನಡೆದಿದ್ದು, 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಸೊರಬ ಪುರಸಭೆಯ ಎಫ್‌ಡಿಎ ಚಂದ್ರಕಲಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ನಗರಸಭೆ ಕಂದಾಯ ನಿರೀಕ್ಷಕ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದಾರೆ.

ತುಮಕೂರು ಹಾಗೂ ಬೆಳಗಾವಿಯಲ್ಲಿಯೂ ದಾಳಿ ನಡೆದಿದ್ದು, ತುಮಕೂರಿನ ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಇನ್ನು ಬೆಳಗಾವಿಯ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!