ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಏಕಕಾಲಕ್ಕಿ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಲೋಕಾಯುಕ್ತ, ಉಪ ಲೋಕಾಯುಕ್ತ ಹಾಗೂ ನ್ಯಾಯಾಂಗ ಅಧಿಕಾರಿಗಳು ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ವ್ಯಾಪ್ತಿಯ ಕಚೇರಿಗಳ ಮೇಲೆ ದಾಳಿ ನಡೆಸಿ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಕೆಲಸಗಳಲ್ಲಿ ವಿಳಂಬ ಕುರಿತಾದ ಸಾಕಷ್ಟು ದೂರುಗಳು ಲೋಕಾಯುಕ್ತಕ್ಕೆ ಬಂದಿದ್ದು, ದಾಳಿ ನಡೆಸಲಾಗಿದೆ, ದಾಳಿ ವೇಳೆ ನಗದು ಹಾಗೂ ಕೆಲವು ಕಡತಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಪೂರ್ವ, ಬೊಮ್ಮನಹಳ್ಳಿ, ರಾಜಾಜಿ ನಗರ, ಮಲ್ಲೇಶ್ವರಂ, ಬಸವನಗುಡಿ, ವಿಜಯನಗರ ಹಾಗೂ ಯಶವಂತಪುರ ಭಾಗದಲ್ಲಿ ದಾಳಿ ನಡೆಸಲಾಗಿದೆ.