ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಇರದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿನಾ ಎಂದು ಗೃಹ ಸಚಿವ ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ.
ಮುಡಾ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐಗೆ ಕೊಡುವ ವಿಚಾರದಲ್ಲಿ ಹೈಕೋರ್ಟ್ ಆದೇಶ ಮಾಡಿದೆ. ಸಿಬಿಐಗೆ ಕೊಡೋ ಅಗತ್ಯ ಇಲ್ಲ. ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಎರಡು ಏಜೆನ್ಸಿಗಳು ಒಂದೇ ವಿಷಯದಲ್ಲಿ ತನಿಖೆ ಮಾಡೋದು ಕಾನೂನಿಗೆ ವಿರುದ್ದ ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.