ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಸಂಜಯನಗರದಲ್ಲಿರುವ ನಿವಾಸಕ್ಕೆ ಲೋಕಾಯುಕ್ತ ಇನ್ ಸ್ಪೆಕ್ಟರ್ ಮಹದೇವಯ್ಯ ನೇತೃತ್ವದ ತಂಡ ಧಾವಿಸಿದ್ದು, ಮನೆಯಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.
5 ಲಕ್ಷ ಬಾಂಡ್, ಇಬ್ಬರ ಶೂರಿಟಿ ಮೇಲೆ ಜಾಮೀನು ಮಂಜೂರಾಗಿದೆ. 48 ಗಂಟೆಯೊಳಗೆ ವಿಚಾರಣೆಗೆ ಲೋಕಾಯುಕ್ತದ ಮುಂದೆ ಹಾಜರಾಗಬೇಕು ಅಂಥ ನ್ಯಾಯಪೀಠ ತಿಳಿಸಿದೆ. ಮಧ್ಯಂತರ ಜಾಮೀನು ನೀಡಿ ಮಾರ್ಚ್ 17ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.
ನಾಳೆ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ವಿವರಣೆ ನೀಡುವ ಸಲುವಾಗಿ ಲೋಕಾಯುಕ್ತದ ಮುಂದೆ ಹಾಜರಾಗಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಈ ನಡುವೆ ಅವರು ನಾಳೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಪ್ರಕರಣ ಸಂಬಂಧ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.