Thursday, December 8, 2022

Latest Posts

ಧೂಳಖೇಡ ಆರ್ ಟಿ ಓ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ದಾಖಲೆ ಪರಿಶೀಲನೆ

ಹೊಸದಿಗಂತ ವರದಿ ವಿಜಯಪುರ:

ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಆರ್’ಟಿಒ ಚೆಕ್‌ಪೋಸ್ಟ್ ಮೇಲೆ ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ ಆರ್’ಟಿಒ ಚೆಕ್ ಪೋಸ್ಟ್‌ನಲ್ಲಿ ಲೋಕಾಯುಕ್ತ ಎಸ್ಪಿ ಅನಿತಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಧೂಳಖೇಡ ಚೆಕ್ ಪೋಸ್ಟ್‌ನಲ್ಲಿ ಸಂಗ್ರಹವಾಗಿದ್ದ 3 ರಿಂದ 4 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದು,
ಪ್ರಮುಖ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೇ, 7-8 ಹೋಮ್ ಗಾರ್ಡ್‌ಗಳ ವಿಚಾರಣೆ ಹಾಗೂ ಅಗತ್ಯ ದಾಖಲೆ, ಮಾಹಿತಿ ಕಲೆಯನ್ನು ಲೋಕಾಯುಕ್ತ ಅಧಿಕಾರಿಗಳು ಮಾಡುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!