ಹೊಸದಿಗಂತ ವರದಿ ಮೈಸೂರು:
ಮೈಸೂರು ಹಾಗೂ ಮಡಿಕೇರಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ADGP ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ADGPಗೆ ಮೈಸೂರು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಸಾಥ್ ನೀಡಿದ್ದಾರೆ.ನಾಲ್ವರು ಡಿವೈಎಸ್ಪಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.
ಮೈಸೂರಿನ PWD ಇಂಜಿನಿಯರ್ ನಾಗರಾಜು ಮನೆ ಮೇಲೆ ದಾಳಿ ನಡೆಸಲಾಗಿದೆ.
ಮಡಿಕೇರಿಯಲ್ಲಿ ಜ್ಯೂನಿಯರ್ ಇಂಜಿನಿಯರ್ ರಫೀಕ್ ಎಂಬುವವರ ಮನೆ ಹಾಗೂ ಇನ್ಸ್ಪೆಕ್ಟರ್ ಎಂ.ಮಹೇಶ್ ಎಂಬುವವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.