ಹೊಸದಿಗಂತ ವರದಿ ಅಂಕೋಲಾ:
ರಾಜ್ಯಾದ್ಯಂತ ಅಧಿಕಾರಿಗಳ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ತಾಲೂಕಿನ ಬೆಲೇಕೇರಿಯಲ್ಲಿ ಸಹ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜೇಶ ಹಮ್ಮಣ್ಣ ನಾಯಕ ಎನ್ನುವವರ ಅಂಕೋಲಾದ ಬೆಲೇಕೇರಿಯ ಮನೆ, ಕುಂದಾಪುರದಲ್ಲಿ ಇರುವ ಇನ್ನೊಂದು ಮನೆ ಮತ್ತು ಉಡುಪಿಯ ವಾಣಿಜ್ಯ ತೆರಿಗೆ ಕಚೇರಿಯ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಅಂಕೋಲಾ ತಾಲೂಕಿನ ಬೆಲೇಕೇರಿಯಲ್ಲಿ ಲೋಕಾಯುಕ್ತ ಅಧಿಕಾರಿ ಸುರೇಶ ಅವರ ನೇತೃತ್ವದ ಐದು ಜನರ ತಂಡ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.